ಕಡಬ: ಕಾಂಗ್ರೆಸ್ ಸಭೆಯಲ್ಲಿ ಭಿನ್ನಮತ, ಆಕ್ರೋಶ
ಕಡಬದಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಆಕ್ರೋಶ ಸ್ಫೋಟಗೊಂಡಿದೆ.
ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದ ಕೆಲ ಮುಸ್ಲಿಂ ಸಮುದಾಯದ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ಸಮುದಾಯವನ್ನು, ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಭೆಯಲ್ಲಿ ಮಾತಿಗೆ ಮಾತು ಬೆಳೆದು ಗೊಂದಲದ ಸನ್ನಿವೇಶ ನಿರ್ಮಾಣವಾಗಿತ್ತು. ಮುಸ್ಲಿಮರನ್ನು ಮೂಲೆಗುಂಪು ಮಾಡಲಾಗುತ್ತಿದ್ದು ನಿರಂತರವಾಗಿ ಕಡೆಗಣಿಸಲಾಗುತ್ತಿದೆ ಎಂದು ಕೆಲವು ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಸಾಮಾಧಾನಿತರನ್ನು ಸಮಾಧಾನ ಮಾಡಲು ಪ್ರಯತ್ನಿಸಿದರಾದರೂ ಸಫಲ ಆಗಿಲ್ಲ. ಕೆಲ ಮುಸ್ಲಿಂ ನಾಯಕರು ಸಭೆಯಿಂದ ಹೊರನಡೆದ ಬಳಿಕ ಸಭೆ ಮುಂದುವರೆದಿದೆ ಎನ್ನಲಾಗಿದೆ.