ಅಕ್ರಮ ದನ ಸಾಗಾಟದ ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು
ಕಡಬ: ಅಕ್ರಮ ದನ ಸಾಗಾಟದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಮರ್ಧಾಳ ಜಂಕ್ಷನ್ ನಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ವಿಠಲ ರೈಯವರು ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಕಾರನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದು, ವಿಠಲ ರೈಯವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ್ದು ಸ್ಥಳಕ್ಕೆ ಎಸ್ಪಿ ಬರುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.