ಕಡಬ: ಪ್ರತಿಭಟನೆಯಲ್ಲಿ ಭಾಗಿಯಾದ ಸುಳ್ಯ ಶಾಸಕಿ ಭಾಗೀರಥಿ ಹಾಗೂ ಬೆಳ್ತಂಗಡಿ ಶಾಸಕ ಪೂಂಜಾ
ಕಡಬ: ಮರ್ಧಾಳದಲ್ಲಿ ಗೋ ಸಾಗಾಟದ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ವಿಚಾರವಾಗಿ ಹಿಂದೂಪರ ಸಂಘಟನೆಯವರು ಕಡಬದ ರಾಜ್ಯ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಗಮಿಸಿ ಪ್ರತಿಭಟನೆಗೆ ಸಾಥ್ ನೀಡಿದರು.
ಪ್ರತಿಭಟನಾಕಾರರ ಜೊತೆ ಕುಳಿತುಕೊಂಡ ಇಬ್ಬರು ಶಾಸಕರು ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.