ಬೆಳ್ತಂಗಡಿ: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ
ಬೆಳ್ತಂಗಡಿ: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ತಾಲೂಕಿನ ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಪ್ರಮೀಳಾ(37) ಎಂಬವರ ಮನೆಯಲ್ಲಿ ಕಳವು ಕೃತ್ಯ ನಡೆದಿದೆ.

ಮಾ
.26ರ ರಾತ್ರಿಯಿಂದ 29ರ ಬೆಳಗ್ಗಿನ ಅವಧಿ
ಯೊಳಗೆ ಕಳ್ಳತನ ಕೃತ್ಯ ನಡೆದಿದೆ. ಮನೆಗೆ ನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿದ್ದ ಪ್ರಮೀಳಾ ಹಾಗೂ ಆಕೆಯ ಮಗಳ ಸುಮಾರು 43 ಗ್ರಾಂ ತೂಕದ ಚಿನ್ನದ ಒಡವೆಗಳನ್ನು
ಕಳ್ಳತನ ನಡೆಸಿದ್ದು ಕಳವಾಗಿರುವ ಸೊತ್ತುಗಳ
ಒಟ್ಟು ಮೌಲ್ಯ ಸುಮಾರು 2.15 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.