ಕರಾವಳಿ

ಕಡಬ: ಅಕ್ರಮ ಗೋ ಸಾಗಾಟದ ಕಾರು ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಪ್ರಕರಣ- ಇಬ್ಬರು ವಶಕ್ಕೆ



ಕಡಬ: ಅಕ್ರಮ ದನ ಸಾಗಾಟದ ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಪ್ರತಿಭಟನೆಯ ಚಿತ್ರ

ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಬಳಿಕ ಹಿಂದೂ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದ್ದು ಸ್ಪಷ್ಟ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!