ಕೆಪಿಸಿಸಿಗೆ ನೂತನ ಪದಾಧಿಕಾರಿಗಳ ನೇಮಕ: 43 ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ನೂತನ ತಂಡದ ಪದಾಧಿಕಾರಿಗಳ ಪಟ್ಟಿಯನ್ನು ಎ.1ರಂದು ಎಐಸಿಸಿ ಪ್ರಕಟಿಸಿದೆ.
43 ರಾಜ್ಯ ಉಪಾಧ್ಯಕ್ಷರು ಮತ್ತು 138 ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಜೊತೆಗೆ ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗಿದೆ. ಕೆಪಿಸಿಸಿ ಖಜಾಂಚಿಯಾಗಿ ವಿನಯ್ ಕಾರ್ತಿಕ್ ಅವರನ್ನೇ ಮುಂದುವರಿಸಲಾಗಿದೆ. ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ್ ಬಾಬು ಅವರನ್ನು ನೇಮಕ ಮಾಡಲಾಗಿದೆ, ವಿನಯ್ ಮತ್ತಿಕಟ್ಟಿ ಅವರನ್ನು ಸಾಮಾಜಿಕ ಜಾಲತಾಣ ಸಹ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.