ಕ್ರೈಂಜಿಲ್ಲೆ

ರಂಜಾನ್ ಉಪವಾಸ ಮುಗಿಸಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು



ರಂಜಾನ್ ಉಪವಾಸ ಮುಗಿಸಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

10ನೇ ತರಗತಿಯ ಮೂವರು ವಿದ್ಯಾರ್ಥಿಗಳು ಈಜಲು ತುಂಗಾ ನದಿಗೆ ತೆರಳಿದ್ದ ವೇಳೆ ದುರಂತ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ರಫನ್, ಇಯನ್ ಹಾಗೂ ಸಮ್ಮರ್ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ

Leave a Reply

Your email address will not be published. Required fields are marked *

error: Content is protected !!