ಕರಾವಳಿರಾಜಕೀಯರಾಜ್ಯ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಎಂ ಎಸ್ ಮಹಮ್ಮದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಸ್ ಮಹಮ್ಮದ್ ನೇಮಕಗೊಂಡಿದ್ದಾರೆ.

ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಎಂ.ಎಸ್ ಮಹಮ್ಮದ್ ಅವರಿಗೆ ಇದೀಗ ಮಹತ್ವದ ಹುದ್ದೆ ಲಭಿಸಿದಂತಾಗಿದೆ. ಈ ಹಿಂದೆ ಕೆಪಿಸಿಸಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಎಂ.ಎಸ್ ಮಹಮ್ಮದ್ ಅವರು ಜಿಲ್ಲೆ ಮತ್ತು ಬ್ಲಾಕ್ ಮಟ್ಟದಲ್ಲಿ ಅನೇಕ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಮೂರು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಒಂದು ಬಾರಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಎಂ.ಎಸ್ ಮುಹಮ್ಮದ್ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ಸಿಗುತ್ತಿಲ್ಲ, ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಆರೋಪಿಸಿ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡಿತ್ತು, ಮಾದ್ಯಮಗಳಲ್ಲೂ ಈ ಬಗ್ಗೆ ವರದಿ ಬಂದಿತ್ತು. ಇತ್ತೀಚೆಗೆ ನಿಯೋಗವೊಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬಳಿಗೆ ತೆರಳಿ ಎಂ.ಎಸ್ ಮಹಮ್ಮದ್ ಅವರಿಗೆ ಉತ್ತಮ ಸ್ಥಾನಮಾನ ನೀಡುವಂತೆ ಮನವಿಯನ್ನೂ ನೀಡಿತ್ತು. ಇದೀಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ಲಭಿಸಿದ್ದು ಮುಂದಕ್ಕೆ ಎಂ.ಎಸ್ ಮುಹಮ್ಮದ್ ಅವರನ್ನು ಎಂಎಲ್‌ಸಿ ಮಾಡಬೇಕೆಂದು ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!