ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾಗುವ ಮೂಲಕ ಕೆಟ್ಟ ದಾಖಲೆ ಬರೆದ ರೋಹಿತ್ ಶರ್ಮಾ
ಮುಂಬೈ ಇಂಡಿಯನ್ಸ್ ತಂಡದ ಓಪನರ್ ರೋಹಿತ್ ಶರ್ಮಾ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾಗುವ ಮೂಲಕ ಕೆಟ್ಟ ದಾಖಲೆಯೊಂದನ್ನು ಬರೆದಿದ್ದಾರೆ.
ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ಇದುವರೆಗೆ 17 ಬಾರಿ ಗೋಲ್ಡನ್ ಡಕ್‌ನಲ್ಲಿ ಔಟಾಗಿದ್ದಾರೆ. ರೋಹಿತ್‌ಗಿಂತ ಮೊದಲು ಆರ್‌ಸಿಬಿಯ ದಿನೇಶ್ ಕಾರ್ತಿಕ್ ಕೂಡ ಐಪಿಎಲ್‌ನಲ್ಲಿ 17 ಬಾರಿ ಶೂನ್ಯಕ್ಕೆ ಔಟ್ ಆಗಿದ್ದಾರೆ.
ಈ ಇಬ್ಬರನ್ನು ಹೊರತುಪಡಿಸಿ ಅಧಿಕ ಬಾರಿ ಶೂನ್ಯಕ್ಕೆ ಔಟಾದ ಪಟ್ಟಿಯಲ್ಲಿ ಜಂಟಿಯಾಗಿ ನಾಲ್ವರು ಆಟಗಾರರು ಎರಡನೇ ಸ್ಥಾನದಲ್ಲಿದ್ದಾರೆ. ಅವರಲ್ಲಿ ಪಿಯೂಷ್ ಚಾವ್ಲಾ, ಮನದೀಪ್ ಸಿಂಗ್, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಸುನಿಲ್ ನರೈನ್ ತಲಾ 15 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.