ರಾಜಕೀಯರಾಜ್ಯ

ಮಂಡ್ಯ ಲೋಕಸಭೆ: ಸುಮಲತಾ   ಮುಂದಿನ ನಡೆ ಇಂದು ತೀರ್ಮಾನ

ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅವರು ತಮ್ಮ ಮುಂದಿನ ನಡೆಯ ಬಗ್ಗೆ ಎ.3ರಂದು ನಿರ್ಧರಿಸಲಿದ್ದಾರೆ. ನಗರದ ಸಮುದಾಯ ಭವನದ ಆವರಣದಲ್ಲಿ ಇಂದು (ಬುಧವಾರ) ಬೆಳಿಗ್ಗೆ 10 ಗಂಟೆಗೆ ಬೆಂಬಲಿಗರ ಸಭೆ ನಡೆಸಲಿದ್ದೇನೆ. ಆ ಬಳಿಕ ಲೋಕಸಭೆ ಚುನಾವಣೆ ಸಂಬಂಧ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ
ತಿಳಿಸಿದ್ದಾರೆ.

ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ ಈ ಕ್ಷೇತ್ರದ ಬಗ್ಗೆ ರಾಷ್ಟ್ರೀ ಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!