ಕರಾವಳಿಕ್ರೈಂ

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ- ಪ್ರಕರಣ ದಾಖಲುಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿದ್ದು ಮೂರು ಜಾನುವಾರುಗಳನ್ನು ರಕ್ಷಿಸಿ, ವಾಹನವನ್ನು ವಶಪಡಿಸಿಕೊಂಡು ಇಬ್ಬರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಎ.2ರಂದು ನಗರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟರ್‌ ಹಾಗೂ ಅದರ ಹಿಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನವನ್ನು ಪೊಲೀಸರು ಪರಿಶೀಲನೆಗಾಗಿ ತಡೆದಾಗ ಎರಡೂ ವಾಹನಗಳನ್ನು ನಿಲ್ಕಿಸಿದ್ದು ಸ್ಕೂಟರ್ ಸವಾರ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾನೆ.

ಟಾಟಾ ಏಸ್ ವಾಹನವನ್ನು ಪರಿಶೀಲಿಸಲಾಗಿ ಅದರಲ್ಲಿ ಮೂರು ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನ್ನೆಲ್ಲೆಯಲ್ಲಿ ಸ್ಕೂಟರ್ ಸವಾರ ಕಳಿಯ ಗ್ರಾಮದ ಹಂಝ್ ಹಾಗೂ ಟಾಟಾ ಏಸ್ ಚಾಲಕ ಎಚ್.ಎಸ್ ಮಧು ಎಂಬವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!