ರಾಜಕೀಯರಾಷ್ಟ್ರೀಯ

ಕಾಂಗ್ರೆಸ್‌ನ ‘ಘರ್ ಘರ್ ಗ್ಯಾರಂಟಿ’ ಅಭಿಯಾನಕ್ಕೆ ಚಾಲನೆ



ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ನ ‘ಘರ್ ಘರ್ ಗ್ಯಾರಂಟಿ’ ಅಭಿಯಾನಕ್ಕೆ  ಬುಧವಾರ ಚಾಲನೆ ನೀಡಿದರು. ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದ ಕೈಥವಾಡದ ಉಸ್ಮಾನ್‌ಪುರದಿಂದ ಈ ಅಭಿಯಾನವನ್ನು  ಖರ್ಗೆ ಪ್ರಾರಂಭಿಸಿದರು.

ಈ ಅಭಿಯಾನದ ಮೂಲಕ ದೇಶದಾದ್ಯಂತ ಎಂಟು ಕೋಟಿ ಮನೆಗಳಿಗೆ ತಲುಪಿ ಗ್ಯಾರಂಟಿ ಬಗ್ಗೆ ಅರಿವು ಮೂಡಿಸುವ ಗುರಿ ಹೊಂದಲಾಗಿದೆ.

‘ನಮ್ಮ ‘ಪಂಚ ನ್ಯಾಯ ಪಚ್ಚೀಸ್ ಗ್ಯಾರಂಟಿ’ ಅನ್ನು ಜನರಿಗೆ ತಲುಪಿಸಲು ಈ ಗ್ಯಾರಂಟಿ ಕಾರ್ಡ್ ವಿತರಿಸುತ್ತಿದ್ದೇವೆ. ದೇಶದಾದ್ಯಂತ ಎಂಟು ಕೋಟಿ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸುವ ಯೋಜನೆ ಹೊಂದಿದ್ದೇವೆ. ನಾವು ನೀಡಿದ ಭರವಸೆಗಳನ್ನೆಲ್ಲ ಈಡೇರಿಸಲಿದ್ದೇವೆ ಎಂದು ಜನರಿಗೆ ತಿಳಿಸಲಿದ್ದೇವೆ’ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಪ್ರಧಾನಿ ‘ಮೋದಿ ಕಿ ಗ್ಯಾರಂಟಿ’ ಬಗ್ಗೆ ಮಾತನಾಡುತ್ತಾರೆ. ಆದರೆ ಅವರ ಗ್ಯಾರಂಟಿಗಳು ಎಂದಿಗೂ ಜನರನ್ನು ತಲುಪುವುದಿಲ್ಲ. ಪ್ರಧಾನಿ ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಬಗ್ಗೆ ಮಾತನಾಡುತ್ತಾರೆ. ಆದರೆ ಜನರಿಗೆ ಅದು ಸಿಕ್ಕಿಲ್ಲ’ ಎಂದು ಅವರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!