ಸುಮಲತಾ ಅಂಬರೀಶ್ ನಾಳೆ ಬಿಜೆಪಿಗೆ ಸೇರ್ಪಡೆ
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ಏ.5ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯುವ ಪಕ್ಷ ಸೇರ್ಪಡೆ ಕಾರ್ಯಕ್ರದಲ್ಲಿ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ, ಆರ್. ಅಶೋಕ್, ಮಾಜಿ ಸಿಎಂ ಬಿ.ಎಸ್. ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.