“ನಿಮ್ಮನ್ನು ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದಿದ್ದ ಬಿ.ವೈ.ವಿಜಯೇಂದ್ರಗೆ ಕೆ.ಎಸ್.ಈಶ್ವರಪ್ಪ ತಿರುಗೇಟು
ಶಿವಮೊಗ್ಗದಲ್ಲಿ ಈಶ್ವರಪ್ಪ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ “ನಿಮ್ಮನ್ನು ಕೈ ಮುಗಿದು ಕೇಳಿಕೊಳ್ಳುತ್ತೇನೆ, ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಿ” ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

“ನನಗೆ ಮನವಿ ಮಾಡಿಕೊಳ್ಳುವ ಬದಲು ನಿಮ್ಮ ಅಣ್ಣನಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದೆ ಸರಿಯಲು ಹೇಳಿ. ನಿಮಗೆ ಧೈರ್ಯವಿದ್ದರೆ ವಾಪಸ್ ತೆಗೆಸಿ ಎಂದು ಹೇಳಿದ್ದಾರೆ.
ಈಶ್ವರಪ್ಪ ಗೆಲ್ಲಲಿ ಬಿಡು. ನೀನು ಸ್ಪರ್ಧೆ ಮಾಡಬೇಡ ಎಂದು ನಿಮ್ಮಣ್ಣ ರಾಘವೇಂದ್ರಗೆ ಹೇಳಿ. ನೀನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿ” ಎಂದು ಈಶ್ವರಪ್ಪ ಒತ್ತಾಯಿಸಿದ್ದಾರೆ. ಆ ಮೂಲಕ ತನ್ನ ಆಕ್ರೋಶ ಹೊರ ಹಾಕಿದ್ದಾರೆ.