ಅಂತಾರಾಷ್ಟ್ರೀಯಕ್ರೈಂರಾಷ್ಟ್ರೀಯ

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಭಾರತ ಮೂಲದ ವಿದ್ಯಾರ್ಥಿಯ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ



ಅಮೆರಿಕದಲ್ಲಿ ಮತ್ತೋರ್ವ ಭಾರತೀಯ ಯುವಕ ಶವವಾಗಿ ಪತ್ತೆಯಾಗಿದ್ದಾರೆ. ಓಹಿಯೋ ನಗರದಲ್ಲಿ ಭಾರತ ಮೂಲದ ವಿದ್ಯಾರ್ಥಿಯೊಬ್ಬರ ಶವ ಪತ್ತೆಯಾಗಿದೆ. ಕ್ಲೀವ್ ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2023 ರಲ್ಲಿ ಯುಎಸ್ ಗೆ ತೆರಳಿದ್ದ ಹೈದರಾಬಾದ್ ನ 25 ವರ್ಷದ ವಿದ್ಯಾರ್ಥಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ.

ಮೊಹಮ್ಮದ್ ಅಬ್ದುಲ್ ಅರ್ಫಾತ್ ಸುಮಾರು ಮೂರು ವಾರಗಳಿಂದ ನಾಪತ್ತೆಯಾಗಿದ್ದರು ಮತ್ತು ದೂತಾವಾಸವು ಅಬ್ದುಲ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಮತ್ತು ಅವರನ್ನು ಪತ್ತೆಹಚ್ಚಲು ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಈ ಹಿಂದೆ ತಿಳಿಸಿತ್ತು.

ಇಂದು ಬೆಳಗ್ಗೆ ಅವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಮಾರ್ಚ್ 7 ರಂದು ಕುಟುಂಬದವರೊಂದಿಗೆ ಮಾತನಾಡಿದ್ದರು, ನಂತರ ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು ಎಂದು ಅರ್ಫಾತ್ ತಂದೆ ತಿಳಿಸಿದ್ದಾರೆ. ಅಪರಿಚಿತ ಸಂಖ್ಯೆಯಿಂದ ಕರೆ ಬಂದಿತ್ತು ಬಳಿಕ ಮಗನನ್ನು ಅಪಹರಿಸಿದ್ದೇವೆ ಹಣ ಕೊಡಿ ಎಂದು ಬೇಡಿಕೆ ಇಟ್ಟಿದ್ದಾಗಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!