ನಾಳೆ (ಏ.14) ಪ್ರಧಾನಿ ಮೋದಿ ಮಂಗಳೂರಿಗೆ
ಪ್ರಧಾನಿ ನರೇಂದ್ರ ಮೋದಿ ಅವರು ಎ.14ರಂದು ಮಂಗಳೂರಿಗೆ ಆಗಮಿಸಿ ರೋಡ್ ಶೋ ನಡೆಸಲಿದ್ದಾರೆ.

ನಗರದ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 2ರಿಂದ ಪ್ರಧಾನಿಯ ಕಾರ್ಯಕ್ರಮ ಮುಗಿಯುವವರೆಗೆ ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರಧಾನಿ ಆಗಮಿಸುವ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ ಇದೆ.