ಕರಾವಳಿಕ್ರೈಂ

ಪುಣಚ: ನಿರ್ಮಾಣ ಹಂತದ ಸೇತುವೆ ಕುಸಿದು ಏಳು ಮಂದಿಗೆ ಗಾಯ

ವಿಟ್ಲ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆ ಕುಸಿದು ಬಿದ್ದಿದೆ.

ಸೇತುವೆಯ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿ ಮೇಲ್ಭಾಗ ಸಂಪೂರ್ಣ ಕುಸಿದಿದ್ದು ಈ ವೇಳೆ ಏಳು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!