ಬಿಜೆಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆ
ಪುತ್ತೂರು: ನೆಲ್ಲಿಕಟ್ಟೆ ನಿವಾಸಿಗಳಾದ ರೋಹಿತ್ ಕುಮಾರ್ ಮತ್ತು ಸಂದೀಪ್ ರವರು ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರು ಪಕ್ಷದ ದ್ವಜ ನೀಡಿ ಅವರನ್ನುಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ್ ರೈ, ಕೆಪಿಸಿಸಿ ಪ್ರ. ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಪುತ್ತೂರು ಚುನಾವಣಾ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದಾಲಿ, ಉಸ್ತುವಾರಿಗಳಾದ ಪ್ರಸನ್ನ ಶೆಟ್ಟಿ ಸಿಝ್ಲರ್, ಮುರಳೀಧರ್ ರೈ ಮಟಂತಬೆಟ್ಟು, ಶ್ರೀಪ್ರಸಾದ್ ಪಾಣಾಜೆ, ಪ್ರಸಾದ್ ಕೌಶಲ್ ಶೆಟ್ಟಿ, ಲ್ಯಾನ್ಸಿ ಮಸ್ಕರೇನಸ್, ನಿಹಾಲ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.