ಬಿಜೆಪಿಗೆ ರಾಜೀನಾಮೆ ನೀಡಿದ್ದ ಸಂಸದ ಸಂಗಣ್ಣ ಕರಡಿಯವರಿಂದ ಸಿಎಂ ಭೇಟಿ
ಬಿಜೆಪಿಗೆ ಹಾಗೂ ಸಂಸದ ಸ್ಥಾನಕ್ಕೆ ನಿನ್ನೆಯಷ್ಟೇ ರಾಜೀನಾಮೆ ನೀಡಿದ್ದ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಬೆಂಬಲಿಗರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರೆಡ್ಡಿ, ಹಂಪನಗೌಡ ಬಾದರ್ಲಿ, ಲಕ್ಷ್ಮಣ್ ಸವದಿ, ಕೊಪ್ಪಳ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಮಾಜಿ ಸಚಿವ ಎಚ್.ಎಂ. ರೇವಣ್ಣ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.