ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1 ಲಕ್ಷ ರೂ. ನೀಡುತ್ತೇವೆ-ರಾಹುಲ್ ಗಾಂಧಿ
ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಈಗಾಗಲೇ ನೀಡುತ್ತಿರುವ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ 24 ಸಾವಿರ ರೂ. ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಿಸುತ್ತೇವೆ. ಸರ್ಕಾರಿ, ಅರೆ ಸರ್ಕಾರಿ ನೌಕರರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉದ್ಯೋಗ ಭದ್ರತಾ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಾವು ನುಡಿದಂತೆ ನಡೆದಿದ್ದೇವೆ. 5 ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡವರಿಗೆ, ಮಹಿಳೆಯರು, ಯುವಕರಿಗೆ ಅನುಕೂಲವಾಗಿದೆ. ಭಾರತ್ ಜೋಡೋ ಯಾತ್ರೆಯಿಂದ ರೈತರ ಸಂಕಷ್ಟ ಕಂಡಿದ್ದೇನೆ ಎಂದು ಹೇಳಿದ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಉದ್ಯಮಿಗಳ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದೆ. ಆದರೆ ರೈತರ ಸಾಲಮನ್ನಾ ಮಾಡಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ.