ಕರಾವಳಿಕ್ರೈಂ

ಬೆಳ್ತಂಗಡಿ: ಸಾಕು ನಾಯಿ ದಾಳಿ ಮಹಿಳೆಗೆ ಗಂಭೀರ ಗಾಯ



ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೆ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಎ.18 ರಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ



ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ  ಪೂರ್ಣಿಮಾ (49. ವ) ಎಂಬವರು ತನ್ನ ಮನೆಯ ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದಾರೆ.


ಪೂರ್ಣಿಮಾ ತನ್ನ ಮನೆಯಲ್ಲಿ ಸಾಕಿದ್ದ ಸಾಕು ನಾಯಿ ಜತೆ ಎಂದಿನಂತೆ ಎ.18ರಂದು ಆಟವಾಡುತ್ತಿದ್ದರು. ಈ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಜಾರಿಬಿದ್ದ ವೇಳೆ ಸಾಕು ನಾಯಿ ಮಹಿಳೆಯ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದ್ದು. ಕೈಗೆ ಕಚ್ಚಿ ಗಂಭೀರ ಗಾಯಮಾಡಿದೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!