ಕರಾವಳಿರಾಜಕೀಯರಾಜ್ಯ

ಮಂಗಳೂರು ಮಾಜಿ ಮೇಯರ್ ಕಾಂಗ್ರೆಸ್‌ನ ಕವಿತಾ ಸನಿಲ್ ಬಿಜೆಪಿ  ಸೇರ್ಪಡೆ



ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕಾಂಗ್ರೆಸ್‌ನ ಕವಿತಾ ಸನಿಲ್ ಏ.20ರಂದು ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕವಿತಾ ಸನಿಲ್ ಅವರಿಗೆ ಬಿಜೆಪಿ ಧ್ವಜ ನೀಡಿ ರಾಜ್ಯಾಧ್ಯಕ್ಷ ವಿ.ವೈ. ವಿಜಯೇಂದ್ರ ಪಕ್ಷಕ್ಕೆ ಬರಮಾಡಿಕೊಂಡರು.

ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಅಗತ್ಯವಿದೆ. ಅವರ ಕೈಗಳನ್ನು ಬಲಪಡಿಸುವ ನಿಟ್ಟಿನಲ್ಲಿ  ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ತಾನು ಬಿಜೆಪಿ ಸೇರ್ಪಡೆಯಾಗಿರುವುದಾಗಿ ಕವಿತಾ ಸನಿಲ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!