ಕುಂಬ್ರ: ಶಾಸಕ ಅಶೋಕ್ ರೈ ಸಮ್ಮುಖದಲ್ಲಿ ಭರತ್ ಕಾಂಗ್ರೆಸ್ ಸೇರ್ಪಡೆ
ಪುತ್ತೂರು: ಏಪ್ರಿಲ್ 20ರಂದು ಸಂಜೆ ಕುಂಬ್ರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಪುತ್ತೂರು ಕಲ್ಲಾರೆ ಭರತ್ ಪ್ರಿಂಟರ್ಸ್ನ ಮಾಲಕ ಭರತ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರವರು ಪಕ್ಷದ ಧ್ವಜ ನೀಡಿ ಭರತ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು