ಪುತ್ತೂರಿನಲ್ಲಿ ಕಾಂಗ್ರೆಸ್ ನಡೆಸಲುದ್ದೇಶಿಸಿದ್ದ ರ್ಯಾಲಿಯನ್ನು ಸಾರ್ವಜನಿಕರಿಗೆ ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ರದ್ದುಪಡಿಸಲಾಗಿದೆ ಅಶೋಕ್ ರೈ
ಪುತ್ತೂರು: ಪುತ್ತೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಚುನಾವಣಾ ಪ್ರಚಾರ ರ್ಯಾಲಿಯನ್ನು ಸಾರ್ವಜನಿಕರ ಹಿತ ದೃಷ್ಟಿಯಿಂದ ಕೈ ಬಿಡಲಾಗಿದ್ದು ಅದರ ಬದಲಾಗಿ ಕಿಲ್ಲೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಬೃಹತ್ ರ್ಯಾಲಿ ನಡೆಸುವ ಯೋಜನೆಯನ್ನು ನಾವು ಹಾಕಿಕೊಂಡಿದ್ದೆವು. ರ್ಯಾಲಿ ನಡೆಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕ ವಲಯದಿಂದ ನಮಗೆ ಮನವಿ ಬಂದ ಹಿನ್ನೆಲೆಯಲ್ಲಿ ರ್ಯಾಲಿಯನ್ನು ರದ್ದುಪಡಿಸಲಾಗಿದೆ. ಏ.23ರಂದು ಸಂಜೆ 3 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಸಹಿತ ರಾಜ್ಯ ಹಾಗೂ ಜಿಲ್ಲೆಯ ಪ್ರಮುಖ ನಾಯಕರು ಭಾಗವಹಿಸಲಿದ್ದು ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.