ಚುನಾವಣೆಗೂ ಮುನ್ನವೇ ಖಾತೆ ತೆರೆದ ಬಿಜೆಪಿ
ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ. ಗುಜರಾತ್ ನ 26 ಸ್ಥಾನಗಳ ಪೈಕಿ ಸೂರತ್ ಕ್ಷೇತ್ರವನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ.
ಸೂರತ್ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ನಂತರ ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ಇಂದು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗಾಗಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಸಂಸದನಾಗಿ ಆಯ್ಕೆಯಾಗಿದ್ದಾರೆ.