ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ- ಪರಮೇಶ್ವರ್ ಹೇಳಿದ್ದೇನು
ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ. ಹೆಚ್.ಡಿ ರೇವಣ್ಣ ಇರಲಿ, ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ. ದೂರುದಾರರು ಯಾರ ಹೆಸರು ಉಲ್ಲೇಖಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿ. ಪರಮೇಶ್ವರ ಹೇಳಿದ್ದಾರೆ.

ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಿದ್ದೇವೆ. ತನಿಖಾ ತಂಡದಲ್ಲಿ ಎಸ್ಪಿ ಮಟ್ಟದ ಅಧಿಕಾರಿಗಳು ಇದ್ದಾರೆ. ಎಸ್ಐಟಿ ಅಧಿಕಾರಿಗಳ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳು ಪೆನ್ಡ್ರೈವ್, ಸಾಕ್ಷಿ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ. ವಿದೇಶದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ. ಎಸ್ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಲ್ಲ ವಿಡಿಯೋಗಳನ್ನು ಎಫ್ಎಸ್ ಎಲ್ ಕಳುಹಿಸುತ್ತೇವೆ ಎಂದು ಹೇಳಿದರು.