ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್’ಗೆ ಎಸ್ಐಟಿಯಿಂದ ನೋಟಿಸ್
ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ತನಿಖೆಗೆ ಹಾಜರಾಗುವಂತೆ ಆರೋಪಿಗಳಾದ ಎಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರಿಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳ ಹೇಳಿಕೆಗಾಗಿ ರೇವಣ್ಣ ಹಾಗೂ ಪ್ರಜ್ವಲ್‌ಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಲಾಗಿದ್ದು ವಿಚಾರಣೆಗೆ ಹಾಜರಾಗದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದರ ಬಗ್ಗೆಯೂ ತಿಳಿಸಲಾಗಿದೆ ಎಂದು ವರದಿಯಾಗಿದೆ.