ರಾಷ್ಟ್ರೀಯ

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಧಾನಿ ಮೋದಿ ಮೌನದ ವಿರುದ್ದ ಕಿಡಿಕಾರಿದ ರಾಹುಲ್ ಗಾಂಧಿ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಪ್ರಜ್ವಲ್‌ ರೇವಣ್ಣ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ರಾಹುಲ್‌ ಗಾಂಧಿ ಕರ್ನಾಟಕದಲ್ಲಿ ಮಹಿಳೆಯರ ವಿರುದ್ಧ ನಡೆದ ಘೋರ ಅಪರಾಧಗಳ ಬಗ್ಗೆ ನರೇಂದ್ರ ಮೋದಿ ನಾಚಿಕೆಗೇಡಿನ ಮೌನವನ್ನು ಹೊಂದಿದ್ದಾರೆ. ಪ್ರಧಾನಿ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಎಲ್ಲ ಗೊತ್ತಿದ್ದರೂ ಕೇವಲ ಮತಕ್ಕಾಗಿ ನೂರಾರು ಹೆಣ್ಣುಮಕ್ಕಳನ್ನು ಶೋಷಿಸಿದವನ ಪರ ಪ್ರಚಾರ ಮಾಡಿದ್ದು ಯಾಕೆ? ಅಷ್ಟಕ್ಕೂ, ಇಷ್ಟು ದೊಡ್ಡ ಕ್ರಿಮಿನಲ್ ದೇಶದಿಂದ ಹೇಗೆ ಸುಲಭವಾಗಿ ತಪ್ಪಿಸಿಕೊಂಡ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!