ರಾಯ್ ಬರೇಲಿ ಹಾಗೂ ಕೈಸರ್ ಗಂಜ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಬಿಜೆಪಿ
ಉತ್ತರ ಪ್ರದೇಶದ ಕೈಸರ್ ಗಂಜ್ ಲೋಕಸಭಾ ಕ್ಷೇತ್ರ ಹಾಗೂ ರಾಯ್ ಬರೇಲಿಯಿಂದ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಪರವಾಗಿ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಕೈಸರ್ ಗಂಜ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ರಾಯ್ ಬರೇಲಿಯಿಂದ ಯೋಗಿ ದಿನೇಶ್ ಪ್ರತಾಪ್ ಸಿಂಗ್ ಅವರಿಗೆ ಟಿಕೆಟ್ ನೀಡಲಾಗಿದೆ.