ಸುಬ್ರಹ್ಮಣ್ಯ: ಸಿಡಿಲು ಬಡಿದು ನವವಿವಾಹಿತ ಮೃತ್ಯು
ಸಿಡಿಲು ಬಡಿದು ನವವಿವಾಹಿತ ಸಾವನ್ನಪ್ಪಿರುವ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34. ವ) ಮೃತ ರ್ದುದೈವಿ.

ಎರಡು ವಾರದ ಹಿಂದೆಯಷ್ಟೇ ವಿವಾಹವಾಗಿದ್ದ ಸೋಮಸುಂದರ್, ಮಳೆ ಬರುವ ಹಿನ್ನೆಲೆಯಲ್ಲಿ ಅಂಗಳದಲ್ಲಿದ್ದ ಅಡಿಕೆ ರಾಶಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ಆಸ್ಪತ್ರೆ ಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.