ಹೆಚ್ಡಿ ರೇವಣ್ಣ ಬಂಧನ
ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಮೇ.4ರಂದು ಸಂಜೆ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.