ಇಸ್ರೇಲ್ ವಿರುದ್ಧ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಹಮಾಸ್
ಇಸ್ರೇಲ್ ಹಾಗೂ ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದ ಕದನ ವಿರಾಮಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿರುವುದಾಗಿ ವರದಿಯಾಗಿದೆ.
ಇಸ್ರೇಲ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದರೆ, ತಮ್ಮ ಬಳಿ ಒತ್ತೆಯಾಳಾಗಿರುವ ಇಸ್ರೇಲ್ ಪ್ರಜೆಗಳನ್ನು ಬಿಡುಗಡೆಗೊಳಿಸುವುದಾಗಿ ಹಮಾಸ್ ತಿಳಿಸಿದೆ.
ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರಕಾರದ ಮೇಲೆ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಲು ಒತ್ತಡ ಹೆಚ್ಚಾಗಿದೆ ಎನ್ನಲಾಗಿದೆ. ಹಮಾಸ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿರುವ ವಿಚಾರ ತಿಳಿಯುತ್ತಿದ್ದಂತೆಯೇ ಪ್ರತಿಭಟನೆ ಮಾಡುತ್ತಿರುವ ಜನರು ಇಸ್ರೇಲ್ ಕೂಡ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.