ಪ್ರಧಾನಿ ನರೇಂದ್ರ ಮೋದಿಯವರಿಂದ ಅಹಮದಾಬಾದ್’ನಲ್ಲಿ ಮತ ಚಲಾವಣೆ
ಲೋಕಸಭಾ ಚುನಾವಣೆಯ 3ನೇ ಹಂತದ ಮತದಾನ ಇಂದು ನಡೆಯುತ್ತಿದ್ದು 11 ರಾಜ್ಯಗಳ 92 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ ನಲ್ಲಿ ಮತ ಚಲಾವಣೆ ಮಾಡಿದ್ದಾರೆ.

ಅಹಮದಾಬಾದ್ ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಗೆ ತೆರಳಿ ಪ್ರಧಾನಿ ಮೋದಿ ಮತದಾನ ಮಾಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯೊಂದಿಗೆ ಗೃಹ ಸಚಿವ ಅಮಿತ್ ಶಾ ಕೂಡ ಉಪಸ್ಥಿತರಿದ್ದರು.
ಮತದಾನ ಮಾಡಿದ ಬಳಿಕ ಪ್ರಧಾನಿ ಮೋದಿ ಜನತೆಗೆ ಶುಭಾಶಯ ಕೋರಿದರು. ತಮ್ಮ ಬೆರಳಿಗೆ ಹಾಕಿರುವ ಶಾಯಿಯನ್ನೂ ತೋರಿಸಿದ ಅವರು, ಮತದಾನ ಮಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.