ರಾಜಕೀಯರಾಜ್ಯ

ಪ್ರಜ್ವಲ್ ರೇವಣ್ಣ ಪರವಾಗಿ  ಸಹಾನುಭೂತಿಯ ಪ್ರಶ್ನೆಯೇ ಇಲ್ಲ:  ಪ್ರಲ್ಹಾದ್ ಜೋಶಿ



ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ  ಪರವಾಗಿ ಯಾವುದೇ ಸಹಾನುಭೂತಿಯ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಪ್ರಲ್ಹಾದ್ ಜೋಶಿ

ಹುಬ್ಬಳ್ಳಿಯ ವಿವೇಕಾನಂದ ಕಾಲೋನಿಯಲ್ಲಿರುವ ಚಿನ್ಮಯ ವಿದ್ಯಾಲಯದಲ್ಲಿ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದ ನಂತರ ಮಾತನಾಡಿದ ಅವರು, ಮಹಿಳೆಯರ ಬಗ್ಗೆ ನಮಗೆ ಕಾಳಜಿ ಇದೆ. ಮಹಿಳೆಯರಿಗೆ ಆಗಿರುವ ಅನ್ಯಾಯದ ಬಗ್ಗೆ ತನಿಖೆ ನಡೆಸಬೇಕು. ಪ್ರಜ್ವಲ್ ಬಗ್ಗೆ ಸಹಾನುಭೂತಿ ಹೊಂದುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!