ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಇನ್ನಿಲ್ಲ
ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ. ವಸಂತ ಬಂಗೇರ (79.ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ 8 ರಂದು ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

15 ಜನವರಿ 1946ರಂದು ಜನಿಸಿದ್ದ ವಸಂತ ಬಂಗೇರ ಅವರು 1972 ರಲ್ಲಿ ಕುವೆಟ್ಟು ಗ್ರಾಮ ಪಂಚಾಯತ್‌ನ ಚುನಾವಣೆಯಲ್ಲಿ ಅವಿರೋಧವಾಗಿ ಸದಸ್ಯರಾಗಿ ಆಯ್ಕೆಯಾಗಿ ನಂತರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1983 ರಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾಯಿತರಾಗಿ ಪ್ರಥಮ ಬಾರಿಗೆ ವಿಧಾನ ಸಭೆಯನ್ನು ಪ್ರವೇಶಿಸಿದ್ದರು.
1985ರಲ್ಲಿ ಮತ್ತೆ ಬಿಜೆಪಿಯಿಂದ ಶಾಸಕರಾದ ಅವರು, 1994ರಲ್ಲಿ ಜನತಾದಳದಿಂದ ಶಾಸಕರಾಗಿ ಆಯ್ಕೆಯಾದರು. 2008 ಮತ್ತು 2013ರಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲನುಭವಿದ್ದರು. ಶಾಸಕ ಸ್ಥಾನ ಇಲ್ಲದ ಬಳಿಕವೂ ರಾಜಕೀಯವಾಗಿ ಜಿಲ್ಲೆಯಲ್ಲಿ ತಮ್ಮ ಪ್ರಭಾವ ಉಳಿಸಿಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ಅವರ ಆತ್ಮೀಯರಾಗಿದ್ದ ಇವರು ಬೆಳ್ತಂಗಡಿಯ ಪ್ರಬಲ ನಾಯಕರಾಗಿದ್ದರು.