ಬಾಲಕಿಯನ್ನು ಭೀಕರವಾಗಿ ಕೊಂದು ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿಲ್ಲ: ಎಸ್ ಪಿ ಸ್ಪಷ್ಟನೆ
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ (33) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುದ್ದಿ ಖಚಿತಗೊಂಡಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

ಕೊಲೆ ಆರೋಪಿ
ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವ್ಯಾಪಕವಾಗಿ ಸುದ್ದಿ ಹರಡಿತ್ತು. ಆದರೆ, ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಸ್.ಪಿ. ಈ ಕುರಿತ ಸುದ್ದಿಯನ್ನು ಪರಿಶೀಲಿಸಲಾಗುತ್ತಿದೆ. ಮೃತದೇಹ ಸಿಕ್ಕಿದೆ ಎಂದು ಹೇಳಲಾದ ಪ್ರದೇಶದಲ್ಲಿ ಹುಡುಕಾಟ ನಡೆದಿದೆ. ಆದರೆ, ಈವರೆಗೆ ಯಾವುದೇ ಮೃತದೇಹ ಸಿಕ್ಕಿಲ್ಲ ಎಂದು ಹೇಳಿದ್ದಾರೆ.