ಬ್ಯಾನರ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಷಗೊಂಡು ಯುವಕ ಮೃತ್ಯು
ಬ್ಯಾನರ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಮಡಿಕೇರಿ ಮೂರ್ನಾಡು ಪಟ್ಟಣದಲ್ಲಿ ಮೇ.10ರಂದು ರಾತ್ರಿ ನಡೆದಿದೆ.
ಮೂರ್ನಾಡು ನಿವಾಸಿ ಆರಿಫ್ (34.ವ) ಮೃತಪಟ್ಟ ಯುವಕ. ಮೂರ್ನಾಡಿನಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯಾವಳಿಗೆ ಆರಿಫ್ ಹಾಗೂ ಸಂಘಟಕರು ಬ್ಯಾನರ್ ಕಟ್ಟುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಬ್ಯಾನರ್ ಕಟ್ಟುತ್ತಿದ್ದ ವೇಳೆ ಆರಿಫ್ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.