ಪಿಕಪ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ: ಪ್ರಕರಣ ದಾಖಲು
ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಬೇಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ಮೇ.11ರಂದು ಮಧ್ಯಾಹ್ನ ನಡೆದಿದೆ. ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಬಂದರು ಗ್ರಾಮದ ಮೈರೋತ್ತಡ್ಕ ನಿವಾಸಿ ರಕ್ಷಿತ್ (25) ಎಂದು
ಗುರುತಿಸಲಾಗಿದೆ.
ಕಣಿಯೂರು ಗ್ರಾಮದ ಪದ್ಮುಂಜ ಎಂಬ
ಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಠಾಣಾ ಪಿಎಸ್ಸೈ ಭರತ್ ಕುಮಾರ್ ವಿ ಅವರ ನೇತೃತ್ವದ ಪೊಲೀಸರು ಪತ್ತೆ ಹಚ್ಚಿದ್ದಾರೆ. ಪಿಕಪ್ ವಾಹನವನ್ನು ಪೊಲೀಸರು ಪರಿಶೀಲನೆ ನಡೆಸಿದಾಗ ಮೂರು ಜಾನುವಾರುಗಳ ಕಾಲುಗಳನ್ನು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ತುಂಬಿರುವುದು ಕಂಡು ಬಂದಿದೆ. ಯಾವುದೇ ಪರ
ವಾಣಿಗೆ ಇಲ್ಲದೇ ಅವುಗಳನ್ನು ಕಡಿದು ಮಾಂಸ ಮಾಡಲು ಸಾಗಾಟ ಮಾಡುವುದಾಗಿ ತಿಳಿಸಿರುತ್ತಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ಉಪ್ಪಿನಂಗಡಿ
ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 57/2024, ಕಲಂ 5,7, ಮತ್ತು 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ 11(ಡಿ) ಪ್ರಾಣಿ ಹಿಂಸಾ ತಡೆ ಕಾಯ್ದೆ ಮತ್ತು 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.