ಸಂಸದರ ನಿಧಿಯ ಹೆಚ್ಚಿನ ಮೊತ್ತವನ್ನು ಸೋನಿಯಾ ಗಾಂಧಿ ಅಲ್ಪಸಂಖ್ಯಾತರಿಗೆ ವ್ಯಯಿಸಿದ್ದಾರೆ: ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಿದ್ದು ಸೋನಿಯಾ ಗಾಂಧಿ ಅವರು ಸಂಸದರಿಗೆ ನೀಡಲಾಗುವ ನಿಧಿಯಲ್ಲಿ 70% ಗಿಂತಲೂ ಹೆಚ್ಚಿನ ಹಣವನ್ನು ಅಲ್ಪಸಂಖ್ಯಾತರಿಗೆ ವ್ಯಯಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ರಾಯ್ ಬರೇಲಿಯಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕ್ಷೇತ್ರದಿಂದ ಗಾಂಧಿ ಕುಟುಂಬಕ್ಕೆ ಹಲವು ವರ್ಷಗಳಿಂದ ಮತ ನೀಡಿದ್ದೀರಿ. ಇಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ನಿಮ್ಮ ಸುಖ-ದುಃಖದಲ್ಲಿ ಕಾಂಗ್ರೆಸ್ ಭಾಗಿಯಾಗುವುದಿಲ್ಲ. ನಾವು ಈ ಕ್ಷೇತ್ರವನ್ನು ಪ್ರಧಾನಿ ಮೋದಿಯವರ ಅಭಿವೃದ್ಧಿಯ ಪಟ್ಟಿಗೆ ಸೇರಿಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.