ಸುಳ್ಯ: ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿ ಸುಳ್ಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ಮೃತರನ್ನು ನೆಟ್ಟಾರುವಿನ ಚರಣ್ ಎಂದು ಗುರುತಿಸಲಾಗಿದೆ. ಚರಣ್ ಸುಳ್ಯದ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.