SSLC: ರಾಜ್ಯಕ್ಕೆ ಟಾಪರ್ ಆದ ವಿದ್ಯಾರ್ಥಿಗಳನ್ನು ನಗದು ಪುರಸ್ಕಾರದೊಂದಿಗೆ ಸನ್ಮಾನಿಸಿದ ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ಬಾಗಲಕೋಟೆ ಮುಧೋಳ ತಾಲ್ಲೂಕಿನ ಮೆಳ್ಳಿಗೇರಿಯಲ್ಲಿರುವ ಮೊರಾರ್ಜೀ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಮತ್ತು ಮೂರನೇ ರ‍್ಯಾಂಕ್ ಪಡೆದ ಮಂಡ್ಯದ ವಿದ್ಯಾರ್ಥಿ ನವನೀತ್ ಅವರನ್ನು ಸನ್ಮಾನಿಸಿದರಲ್ಲದೆ ವೈಯಕ್ತಿಕವಾಗಿ ಕ್ರಮವಾಗಿ ರೂ. 5 ಲಕ್ಷ ಮತ್ತು ರೂ. 2 ಲಕ್ಷ ನೀಡಿ ಪ್ರೋತ್ಸಾಹಿದರು.