ರಾಜ್ಯ

SSLC ಟಾಪರ್ಸ್ ಗಳಿಗೆ ಹಾಗೂ  ಅವರು ಕಲಿತ ಶಾಲೆಗಳಿಗೆ ಬಂಪರ್  ಘೋಷಿಸಿದ ಸಿಎಂ

ಬೆಂಗಳೂರು:2023-2 4ನೇ ಸಾಲಿನ SSLC ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ (625ಕ್ಕೆ 625 ಅಂಕ ) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಬ್ಬರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.

ಅಲ್ಲದೇ ಇವರಿಬ್ಬರಿಗೂ ಓದಿದ ಶಾಲೆಗಳಿಗೂ ಸಿದ್ದರಾಮಯ್ಯ ಅವರು ನೆರವು, ಅನುದಾನ ಘೋಷಿಸಿದ್ದಾರೆ. ಅಂಕಿತಾ ಮತ್ತು ನವನೀತ್ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ‌ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂಗಳ ನೆರವನ್ನು ಸಿಎಂ ನೀಡಿದರು. ಅಲ್ಲದೇ ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ 1 ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!