ಬಂಟ್ವಾಳ: ಲಾರಿ-ಬೈಕ್ ಅಪಘಾತ; ಸವಾರ ಮೃತ್ಯು, ಸಹಸವಾರ ಗಂಭೀರ
ಬಂಟ್ವಾಳ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಾರಿಪಳ್ಳದಲ್ಲಿ ಮೇ.14 ರಂದು ಸಂಜೆ ವೇಳೆ ನಡೆದಿದೆ.
ಸೋನು (19) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಸಹಸವಾರ ಪ್ರಸಾದ್ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಂಟ್ವಾಳ ತಾಲೂಕು ಪುದು ಗ್ರಾಮದ ಮಾರಿಪಳ್ಳ ಜಂಕ್ಷನ್ ಬಳಿ, ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಲಾರಿ, ಬೈಕ್ ಸವಾರ ಹಾಗೂ ಸಹಸವಾರರ ಮೇಲೆ ಹರಿದಿದೆ. ಗಾಯಗೊಂಡ ಬೈಕ್ ಸವಾರ ಸೋನು ಎಂಬವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೊಗಲಾಗಿತ್ತು. ಅಲ್ಲಿ ಅವರನ್ನು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು, ಸಹಸವಾರ ಪ್ರಸಾದ್ ರವರನ್ನು ಚಿಕಿತ್ಸೆಯ ಬಗ್ಗೆ ಮಂಗಳೂರು ಯುನಿಟಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.