ರಾಷ್ಟ್ರೀಯ

ನಾನು ಹಿಂದೂ-ಮುಸ್ಲಿಂ ಬಗ್ಗೆ ಮಾತನಾಡಿಲ್ಲ: ಮೋದಿ

ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂದ ಮಾತ್ರಕ್ಕೆ ಅದು ಮುಸ್ಲಿಮರೇ ಎಂದು ನೀವು ಅರ್ಥೈಸಿಕೊಳ್ಳುವುದೇಕೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ. ನಾನು ವೋಟ್ ಬ್ಯಾಂಕ್ ರಾಜಕಾರಣ ಮಾಡಿಲ್ಲ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಎಲ್ಲಾ ಧರ್ಮದವರನ್ನು ಒಟ್ಟಿಗೆ ಕೊಂಡೊಯ್ಯುವುದೇ ನನ್ನ ಗುರಿ ಎಂದು ಅವರು ತಿಳಿಸಿದ್ದಾರೆ.

2002ರಲ್ಲಿ ಗುಜರಾತ್‌ನಲ್ಲಿ ನಡೆದ ಗೋಧ್ರಾ ಗಲಭೆಯ ನಂತರ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ತಮ್ಮ ವಿರೋಧಿಗಳು ಮುಸ್ಲಿಮರಿಗೆ ನನ್ನ ಮೇಲಿದ್ದ ಗೌರವವನ್ನು ಹಾಳು ಮಾಡುವ ಕೆಲಸ ಮಾಡಿದ್ದಾರೆ. ನಾನು ಹಿಂದೂ-ಮುಸ್ಲಿಂ ಎಂದು ಭೇದ ಭಾವ ಮಾಡಿದರೆ ಅಂದಿನಿಂದ ನನಗೆ ಸಾರ್ವಜನಿಕ ಕ್ಷೇತ್ರದಲ್ಲಿ ನಿಲ್ಲಲು ಅವಕಾಶವಿರುವುದಿಲ್ಲ ಎಂದು ಅವರು ಹೇಳಿದರು.

ಆಗ ಈದ್ ದಿನಗಳಲ್ಲಿ ನಮ್ಮ ಮನೆಯಲ್ಲಿ ಅಡುಗೆ ಮಾಡುತ್ತಿರಲಿಲ್ಲ, ಮುಸ್ಲಿಂ ಕುಟುಂಬದಲ್ಲಿ ಮಾಡಿದ್ದ ಅಡುಗೆಯನ್ನೇ ಊಟ ಮಾಡುತ್ತಿದ್ದೆವು. ಇಂದಿಗೂ ಅನೇಕ ಮುಸ್ಲಿಂ ಸ್ನೇಹಿತರಿದ್ದಾರೆ ಎಂದ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ತಮಗೆ ಮತ ಹಾಕುತ್ತಾರೆಯೇ ಎಂಬ ಪ್ರಶ್ನೆಗೆ ದೇಶದ ಜನತೆ ಮತ ಹಾಕುತ್ತಾರೆ ಎಂದು ಮೋದಿ ಉತ್ತರಿಸಿದರು.

Leave a Reply

Your email address will not be published. Required fields are marked *

error: Content is protected !!