ಅಂಜಲಿ ಹತ್ಯೆ ಪ್ರಕರಣ: ಇನ್ಸ್ಪೆಕ್ಟರ್, ಕಾನ್ಸ್ಟೇಬಲ್ ಅಮಾನತು
ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ಹಿನ್ನಲೆ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಮತ್ತು ಮಹಿಳಾ ಕಾನ್ಸ್ಟೇಬಲ್ ಅನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಅಂಜಲಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ ಅಜ್ಜಿ ಬೆಂಡಿಗೇರಿ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ನಿರ್ಲಕ್ಷಿಸಿದ್ದ ಆರೋಪ ಕೇಳಿಬಂದಿತ್ತು. ಹೀಗಾಗಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಚಂದ್ರಶೇಖರ ಬಿ.ಚಿಕ್ಕೋಡಿ, ಕಾನ್ಸ್ಟೇಬಲ್ ರೇಖಾ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.