ಕ್ರೀಡೆರಾಷ್ಟ್ರೀಯ

ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಕೊಹ್ಲಿ



ಬೆಂಗಳೂರು: ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಅಬ್ಬರಿಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಆ ಮೂಲಕ ತಮ್ಮ ದಾಖಲೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿಕೊಂಡಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ . 18ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 29 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 4 ಬೌಂಡರಿ ನೆರವಿನಿಂದ 47 ರನ್ ಗಳಿಸಿದರು. ಆ ಮೂಲಕ ಅವರು ಹಾಲಿ ಟೂರ್ನಿಯಲ್ಲಿ ತಮ್ಮ ರನ್ ಗಳಿಕೆಯನ್ನು 708ಕ್ಕೆ ಏರಿಸಿಕೊಂಡಿದ್ದಾರೆ.

ಐಪಿಎಲ್ ಇತಿಹಾಸದಲ್ಲೇ 2 ಸೀಸನ್ ಗಳಲ್ಲಿ 700ಕ್ಕೂ ಅಧಿಕ ರನ್ ಗಳಿಸಿದ ಆಟಗಾರ ಎಂಬ ಅಪರೂಪದ ಕೀರ್ತಿಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಕೊಹ್ಲಿ 2016ರಲ್ಲಿ ಈ ಸಾಧನೆ ಮಾಡಿದ್ದರು. ಆ ಟೂರ್ನಿಯಲ್ಲಿ ಕೊಹ್ಲಿ 16 ಪಂದ್ಯಗಳಿಂದ 973 ರನ್ ಕಲೆಹಾಕಿದ್ದರು.

Leave a Reply

Your email address will not be published. Required fields are marked *

error: Content is protected !!