ಕ್ರೈಂಜಿಲ್ಲೆ

ಕೊಲೆಯಾದ ಅಂಜಲಿ ಸಹೋದರಿ ಆತ್ಮಹತ್ಯೆಗೆ ಯತ್ನ

ಭೀಕರವಾಗಿ ಕೊಲೆಯಾದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಅವರು ಅಕ್ಕನ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯಶೋಧ ಅವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಯಶೋಧ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿಮೇ 18 ರಂದು ವಿವಿಧ ಮಠಾಧೀಶರು ಮತ್ತು ಸಾರ್ವಜನಿಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಯಶೋಧ ಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದಿದ್ದರು.ಕೂಡಲೆ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿತ್ತು. ಮನೆಗೆ ಹೋದ ಯಶೋಧ ರಾತ್ರಿ ಪಿನಾಯಲ್​ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!