ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ, ಹೆಡ್ಕಾನ್ಸ್ಟೇಬಲ್ ರೇಖಾರನ್ನು ಅಮಾನತು ಮಾಡಲಾಗಿತ್ತು. ಆ ಮೂಲಕ ಅಂಜಲಿ ಹತ್ಯೆ ಪ್ರಕರಣದಲ್ಲಿ ಮೂವರು ಅಧಿಕಾರಿಗಳ ಅಮಾನತು ಮಾಡಿದಂತಾಗಿದೆ.