ಧೋನಿ ಬಾರಿಸಿದ ಆ ಬಹುದೊಡ್ಡ ಸಿಕ್ಸರ್ ಆರ್.ಸಿ.ಬಿ ಗೆಲುವಿಗೆ ಕಾರಣವಾಯಿತು..!
ಆರ್.ಸಿ.ಬಿ ವಿರುದ್ದ ಪಂದ್ಯ ಗೆದ್ದು ಸಿಎಸ್‌ಕೆ ಪ್ಲೇಆಫ್‌ಗೆ ಪ್ರವೇಶ ಪಡೆಯಲು ಕೊನೆಯ ಓವರ್ ನಲ್ಲಿ 17 ರನ್ ಬೇಕಿತ್ತು, ಯಶ್ ದಯಾಳ್ ಮೊದಲ ಎಸೆತವನ್ನೇ ಎಂಎಸ್ ಧೋನಿ ಸಿಕ್ಸರ್ ಬಾರಿಸುವ ಮೂಲಕ ಆರ್ ಸಿಬಿ ತಂಡದ ಗೆಲುವಿನ ಆಸೆಯನ್ನೇ ಕಸಿದುಕೊಂಡಿದ್ದರು. ಧೋನಿ ಹೊಡೆದ ಆ ಸಿಕ್ಸ್ ನಿಂದ ಚೆಂಡು ಮೈದಾನದಿಂದ ಆಚೆ ಹೋಯಿತು, ಬಳಿಕ ಹೊಸ ಚೆಂಡನ್ನು ಬೌಲರ್ ಗೆ ನೀಡಲಾಯಿತು.

ಮುಂದಿನ ಎಸೆತದಲ್ಲೇ ಯಶ್ ದಯಾಳ್ ಧೋನಿ ಅವರನ್ನು ಔಟ್ ಮಾಡುವ ಮೂಲಕ ಆರ್ ಸಿಬಿ ಗೆಲುವಿನತ್ತ ನೋಟವಿತ್ತಿತು. ಬಳಿಕ ಎಸೆದ ನಾಲ್ಕು ಎಸೆತಗಳಲ್ಲಿ ಕೇವಲ ಒಂದು ರನ್ ನೀಡುವ ಮೂಲಕ ಯಶ್ ದಯಾಳ್ ತಂಡಕ್ಕೆ ಗೆಲುವು ತಂದುಕೊಟ್ಟರು.
ಪಂದ್ಯದ ಬಳಿಕ ಆರ್ ಸಿಬಿ ಡ್ರೆಸ್ಸಿಂಗ್ ರೂಂನಲ್ಲಿ ಮಾತನಾಡಿದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್, ಎಂಎಸ್ ಧೋನಿ ಅಷ್ಟು ದೂರ ಸಿಕ್ಸರ್ ಬಾರಿಸಿದ್ದು ನಮಗೆ ಸಹಾಯವಾಯಿತು. ”ಮಂಜು ಬೀಳುತ್ತಿದ್ದ ಕಾರಣ ಚೆಂಡು ಒದ್ದೆಯಾಗಿದ್ದು, ಬೌಲರ್ ಗಳು ಬೇಕಾದಂತೆ ಬೌಲರ್ ಮಾಡಲು ಕಷ್ಟಪಡುತ್ತಿದ್ದರು. ಆದರೆ ಧೋನಿ ಮೈದಾನದಿಂದ ಹೊರಗೆ ಚಂಡನ್ನು ಕಳುಹಿಸಿದ ಕಾರಣ ಬೇರೆ ಬಾಲ್ ನೀಡಲಾಯಿತು. ಅದರಿಂದ ಯಶ್ ದಯಾಳ್ ಅವರು ತಾವಂದುಕೊಂಡಂತೆ ಬೌಲಿಂಗ್ ಮಾಡಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.