ನಾಳೆ (ಮೇ.21) ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ.21ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದು, ಬಳಿಕ ಬೆಳ್ತಂಗಡಿಗೆ ತೆರಳಿ ಗುರುವಾಯನಕೆರೆಯ ಎಫ್.ಎಂ ಗಾರ್ಡನ್ ನಲ್ಲಿ ನಡೆಯುವ ದಿ ಕೆ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಭಾಗಿಗಳಾಗಲಿದ್ದಾರೆ ಎಂದು ತಿಳಿದು ಬಂದಿದೆ. ಮಧ್ಯಾಹ್ನದ ಬಳಿಕ ಮಂಗಳೂರಿಗೆ ತೆರಳಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.